
ಮಹಾರಾಷ್ಟ್ರದ ಬಾರಾಮತಿಯಲ್ಲಿ ಎನ್ಸಿಪಿ ಶಾಸಕ ರೋಹಿತ್ ಪವಾರ್ ಅವರ ಆಪ್ತ ಸಹಾಯಕ ಅಜಿತ್ ದಶಾವತಾರೆ ಅವರ 12 ವರ್ಷದ ಮಗಳು ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾಳೆ.
ಶನಿವಾರ ತಾಯಿಯೊಂದಿಗೆ ವಾಗ್ವಾದ ನಡೆಸಿ ಮನೆಯಿಂದ ಹೊರಬಂದಿದ್ದ ಬಾಲಕಿ ನಾಪತ್ತೆಯಾಗಿದ್ದಳು, ನಂತರ ರುಯಿ ಗ್ರಾಮದ ಸಾಯಿನಗರದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬಾರಾಮತಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.