Health & Environment
ಪಾಣಾಜೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 16.7 ಸೆಂ.ಮೀ ಮಳೆ ದಾಖಲು

ಪಾಣಾಜೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 16.7 ಸೆಂ.ಮೀ ಮಳೆ ದಾಖಲು

prajavani1h
THE BRIEF
1

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಪಾಣಾಜೆಯಲ್ಲಿ ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿ ಮೀಟರ್ ಮಳೆಯಾಗಿದೆ.

2

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಶುಕ್ರವಾರ ತಡರಾತ್ರಿಯಿಂದ ಬಿರುಸಿನ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಐದು ಕಡೆಗಳಲ್ಲಿ ರಾಜ್ಯದ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದೆ.

3

ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಸಂಜೆ ಅಥವಾ ರಾತ್ರಿ ವೇಳೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.