
2026ನೇ ಸಾಲಿನ ಡಿಪ್ಲೊಮಾ ಇನ್ ಫಾರ್ಮಸಿ (ಡಿ.ಫಾರ್ಮಸಿ) ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ಅಣಕು ಫಲಿತಾಂಶವನ್ನು ಪರಿಶೀಲಿಸಿ ತಮ್ಮ ಆಪ್ಷನ್ ಎಂಟ್ರಿಯಲ್ಲಿ ಬದಲಾವಣೆಗಳನ್ನು ಮಾಡಲು ಅಥವಾ ಹೊಸ ಕಾಲೇಜುಗಳನ್ನು ಸೇರಿಸಲು ಅಕ್ಟೋಬರ್ 28ರ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಅಥವಾ ಪೋಷಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ KEA ಅಧಿಕೃತ ಇ-ಮೇಲ್ ಮೂಲಕ ಸಲ್ಲಿಸಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.