
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆಯನ್ನು 59ನೇ ಸಿಸಿಹೆಚ್ ನ್ಯಾಯಾಲಯವು ಆಗಸ್ಟ್ 20ಕ್ಕೆ ಮುಂದೂಡಿದೆ.
ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಪ್ರದೋಷ್ ಸ್ವಯಂಪ್ರೇರಿತವಾಗಿ ಅರ್ಜಿ ಸಲ್ಲಿಸಿದ್ದಾರೆಯೇ ಮತ್ತು ಅದರ ಪರಿಣಾಮಗಳ ಬಗ್ಗೆ ಅರಿವಿದೆಯೇ ಎಂದು ಪ್ರಶ್ನಿಸಿ ಮಾಹಿತಿ ಪಡೆದಿದ್ದಾರೆ.
ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು ಪ್ರದೋಷ್ ಅರ್ಜಿಯನ್ನು ವಿರೋಧಿಸಿದ್ದು, ಈ ಬಗ್ಗೆ ಸ್ವತಂತ್ರ ವಿಚಾರಣೆ ನಡೆಸುವಂತೆ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.