
ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಮೈಸೂರಿನಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ರೈತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.
ಕೊನೆಗೆ ರೈತರು ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ ಮಾಡಿ ವಿನೂತನ ಧರಣಿ ನಡೆಸಿದ್ದಾರೆ.