
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂಗಾರು ಕ್ಷೀಣಿಸಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಹೆಚ್ಚಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಶುಷ್ಕ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.