
ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಕರ್ನಾಟಕದಲ್ಲಿ ನಡೆದ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೂನ್ಯ ಫಲಿತಾಂಶ ಬಂದಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಸಾಧನೆಯನ್ನು '0' ಎಂದು ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ.
ಮತಪತ್ರಗಳ ಮೂಲಕ ಚುನಾವಣೆ ನಡೆದಿದ್ದರೂ ಕಾಂಗ್ರೆಸ್ಗೆ ಸ್ಥಾನ ಸಿಗದಿರುವುದನ್ನು ಬಿಜೆಪಿ ನಾಯಕರು ಟೀಕೆಗೆ ಬಳಸಿಕೊಂಡಿದ್ದಾರೆ.