
ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಿಆರ್ಪಿಸಿ ಸೆಕ್ಷನ್ ಅಡಿಯಲ್ಲಿ 10,000 ರೂ. ಮೌಲ್ಯದ 'ಶಾಂತಿ ನಿರ್ವಹಣಾ ಬಾಂಡ್' ಸಲ್ಲಿಸುವಂತೆ ದೆಹಲಿ ಪೊಲೀಸರು ನೀಡಿದ್ದ ನೋಟಿಸ್ ರದ್ದು ಕೋರಿ ಸಾಮಾಜಿಕ ಕಾರ್ಯಕರ್ತೆ ನೇಹಾ ಬೋರಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಶೋ-ಕಾಸ್ ನೋಟಿಸ್ ಪ್ರಶ್ನಿಸಿ ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರಿಂದ, ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆಯೇ ವಾದ ಮಂಡಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಕ್ಟೋಬರ್ 16ರಂದು ಮಂಡಿ ಹೌಸ್ನಲ್ಲಿ ಘೋಷಣೆ ಕೂಗಿದ್ದು ಮತ್ತು ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಅವರ ಮೇಲಿದೆ.