
ಮಧ್ಯಪ್ರದೇಶದ ಮಂದಸೌರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಯೊಬ್ಬರ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಬೀದಿ ನಾಯಿಯೊಂದು ಕಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.
ಆಗಸ್ಟ್ 24ರ ರಾತ್ರಿ ಸರ್ಜಿಕಲ್ ವಾರ್ಡ್‌ಗೆ ನುಗ್ಗಿದ ನಾಯಿ, ಬ್ಯಾಗ್‌ನಲ್ಲಿದ್ದ ತಿಂಡಿಯ ವಾಸನೆಗೆ ಅದನ್ನು ಬಾಯಲ್ಲಿ ಕಚ್ಚಿಕೊಂಡು ಹೊರನಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆಸ್ಪತ್ರೆಯ ಸಮೀಪದಲ್ಲೇ ಬ್ಯಾಗ್ ಪತ್ತೆ ಹಚ್ಚಿದ್ದು, ಅದೃಷ್ಟವಶಾತ್ ಎಲ್ಲಾ ಆಭರಣಗಳು ಸುರಕ್ಷಿತವಾಗಿವೆ.