
ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಬೆದರಿ ಓಡಿದ ಘಟನೆಯಲ್ಲಿ ವಾಹನಗಳು ಹಾಗೂ ಬೆಳ್ಳಿಯ ಅಂಬಾರಿಗೆ ಹಾನಿಯಾಗಿದೆ.
ಈ ಘಟನೆಯ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂದಿನ ವರ್ಷದಿಂದ ದಸರಾ ಜಂಬೂಸವಾರಿ ನಡೆಸುವ ಮೊದಲು ಆನೆಗಳಿಗೆ ಕನಿಷ್ಠ 20 ದಿನಗಳಿಂದ ಒಂದು ತಿಂಗಳವರೆಗೆ ಕಡ್ಡಾಯವಾಗಿ ತಾಲೀಮು ನಡೆಸುವ ವ್ಯವಸ್ಥೆ ಕಲ್ಪಿಸಲಾಗಿದೆ.