
ಬೆಂಗಳೂರಿನಲ್ಲಿ ಸ್ವಲ್ಪ ದಿನಗಳ ಬಿಡುವು ನೀಡಿದ್ದ ಮಳೆ ಮತ್ತೆ ಎಂಟ್ರಿ ಕೊಟ್ಟಿದ್ದು, ಮೆಜೆಸ್ಟಿಕ್, ವಿಧಾನಸೌಧ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.
ದಿಢೀರ್ ಸುರಿದ ಮಳೆಯಿಂದಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ.