
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪರ್ವೀಜ್ ಅಹಮದ್ ಸೆಪ್ಟೆಂಬರ್ 13ರಂದು ನಾಪತ್ತೆಯಾಗಿದ್ದರು.
ಗುತ್ತಿಗೆದಾರರ ಒತ್ತಡ ಹಾಗೂ ಹಣ ಬಿಡುಗಡೆಯಾಗದ ಕಾರಣ ತಮಗೆ ಬೇರೆ ಮಾರ್ಗವಿಲ್ಲ ಎಂದು ಪತ್ರ ಬರೆದಿಟ್ಟು ಹೋಗಿದ್ದ ಪರ್ವೀಜ್, ಮುಂಬೈನಲ್ಲಿ ಪತ್ತೆಯಾಗಿದ್ದಾರೆ.
ಗದಗ ಜಿಲ್ಲೆಯ ಬೆಟಗೇರಿ ಬಡಾವಣೆ ಪೊಲೀಸರು ಅವರನ್ನು ಮುಂಬೈನಿಂದ ಕರೆತಂದು ರಹಸ್ಯ ಸ್ಥಳದಲ್ಲಿ ಇರಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.