
ಭಾರತದಲ್ಲಿ ಧರ್ಮ ಮತ್ತು ರಾಷ್ಟ್ರ ಒಂದಕ್ಕೊಂದು ಪೂರಕವಾಗಿದ್ದು, ಇವೆರಡನ್ನೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ತಿಳಿಸಿದ್ದಾರೆ.
ಮುಂಬೈನಲ್ಲಿ ನಡೆದ ಅಖಿಲ ಭಾರತ ವಿಹಾರ ಸೇವಾ ಬಳಗದ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದಿನ ಜಗತ್ತು ಪರಿಸರ ನಾಶ ಹಾಗೂ ಕುಟುಂಬ ವ್ಯವಸ್ಥೆಯ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ ಎಂದರು.
ಭಾರತದ ಬಳಿ ವೇದಗಳು, ಉಪನಿಷತ್ತುಗಳು ಮತ್ತು ಭಗವದ್ಗೀತೆಯಂತಹ ಅಪಾರ ಜ್ಞಾನ ಭಂಡಾರವಿದ್ದು, ಇದರ ಅಗತ್ಯ ಇಂದಿನ ಜಗತ್ತಿಗಿದೆ ಎಂದು ಅವರು ಪ್ರತಿಪಾದಿಸಿದರು.