
ಕಿರುತೆರೆಯ ಜನಪ್ರಿಯ 'ಲಕ್ಷ್ಮೀ ಬಾರಮ್ಮ' ಧಾರಾವಾಹಿ ನಟಿ ತನ್ವಿ ರಾವ್ ಅವರು 'ಭಾವಾಂತರ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಕಾರ್ತಿಕ್ ಶರ್ಮಾ ನಿರ್ದೇಶನದ ಈ ಚಿತ್ರದಲ್ಲಿ ತನ್ವಿ ರಾವ್ ಅವರು 'ರಾಧಾ' ಎಂಬ ಅಪ್ಪಟ ಡಾಕ್ಯುಮೆಂಟರಿ ಫಿಲ್ಮ್ ಮೇಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿಂದೆ ಬಾಲಿವುಡ್ ಚಿತ್ರಗಳು ಹಾಗೂ ತಮಿಳು ಧಾರಾವಾಹಿಯಲ್ಲಿ ನಟಿಸಿದ್ದ ತನ್ವಿ, ರಿಯಲ್ ಲೊಕೇಶನ್‌ಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.