
ಹಬ್ಬದ ಸೀಸನ್ನಲ್ಲಿ ಈರುಳ್ಳಿ ಬೆಲೆ ಏರಿಕೆ ತಡೆಯಲು ಕೇಂದ್ರ ಸರ್ಕಾರವು ಬಫರ್ ಸ್ಟಾಕ್ನಿಂದ ಈರುಳ್ಳಿಯನ್ನು ಬಿಡುಗಡೆ ಮಾಡಿದ್ದು, ಪ್ರತಿ ಕೆಜಿಗೆ 35 ರೂಪಾಯಿಯಂತೆ ಮಾರಾಟ ಆರಂಭಿಸಿದೆ.
ಎನ್ಸಿಸಿಎಫ್, ನಾಫೆಡ್ ಮತ್ತು ಕೇಂದ್ರೀಯ ಭಂಡಾರ್ನ ಸುಮಾರು 100ಕ್ಕೂ ಹೆಚ್ಚು ಮಳಿಗೆಗಳು ಹಾಗೂ ಮೊಬೈಲ್ ವ್ಯಾನ್ಗಳ ಮೂಲಕ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಲಭ್ಯವಾಗಲಿದೆ.
2025-26ನೇ ಸಾಲಿನಲ್ಲಿ ದೇಶದಲ್ಲಿ 307.37 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಉತ್ಪಾದನೆಯಾಗುವ ಅಂದಾಜಿದ್ದು, ಮೇ 15ರಿಂದ ಇಲ್ಲಿಯವರೆಗೆ 1.21 ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಸಂಗ್ರಹಿಸಲಾಗಿದೆ.