
ಕರ್ನಾಟಕದಲ್ಲಿ ಬಾಕಿಯಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು 2027ರ ಜನವರಿ ಮೊದಲ ವಾರದಲ್ಲಿ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ವರ್ಗವಾರು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.
ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯಿತಿ ಹಾಗೂ 3,656 ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿದೆ.
ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ (ಮತಪೆಟ್ಟಿಗೆ) ಬಳಸಲು ತೀರ್ಮಾನಿಸಲಾಗಿದೆ.