
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗಸ್ಟ್ 7ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಲೀಂ ಅಹ್ಮದ್ ಅವರ ಹೆಸರನ್ನು ಎಐಸಿಸಿ ಘೋಷಿಸಿದ ಬಳಿಕ, ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡದಿದ್ದರೆ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ತಿಳಿಸಿದ್ದರಿಂದ, ಸ್ವ ಇಚ್ಛೆಯಿಂದ ಹುದ್ದೆ ತೊರೆಯುತ್ತಿರುವುದಾಗಿ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.