
ಕೂಡ್ಲಿಗಿ ಮತ್ತು ಕೊಟ್ಟೂರು ತಾಲ್ಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 51 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಸೆಪ್ಟೆಂಬರ್ 2 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಗಳನ್ನು ಆಫ್‌ಲೈನ್ ಮೂಲಕ ಪಡೆಯಬೇಕು ಮತ್ತು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸಲ್ಲಿಸಬೇಕೆಂದು ಶಿಶು ಅಭಿವೃದ್ಧಿ ಅಧಿಕಾರಿ ಮಾಲಾಂಬಿ ತಿಳಿಸಿದ್ದಾರೆ.