
ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 1,663 ಕಿ.ಮೀ. ರಾಜ್ಯ ಹೆದ್ದಾರಿ, 3,000 ಕಿ.ಮೀ. ಜಿಲ್ಲಾ ರಸ್ತೆಗಳು ಮತ್ತು 125 ಹೊಸ ಸೇತುವೆಗಳನ್ನು ನಿರ್ಮಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು ಬಿಸಿನೆಸ್ ಕಾರಿಡಾರ್ ಅಡಿಯಲ್ಲಿ 26,000 ಕೋಟಿ ರೂಪಾಯಿ ವೆಚ್ಚದಲ್ಲಿ 117 ಕಿ.ಮೀ. ರಿಂಗ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ 134 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೊತ್ತದ 945 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಕಳೆದ ವರ್ಷ 112 ಲಕ್ಷ ಕೋಟಿ ರೂಪಾಯಿ ವಿದೇಶಿ ಹೂಡಿಕೆ ಆಕರ್ಷಿಸಲಾಗಿದೆ.