
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ 22ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.