
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು (UDF) ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ.
2026ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ದೇಶೀಯ ಪ್ರಯಾಣಿಕರಿಗೆ ₹300 ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ₹997 ಶುಲ್ಕ ನಿಗದಿಪಡಿಸಲಾಗಿದ್ದು, ಈ ದರವು ಮುಂದಿನ 5 ವರ್ಷಗಳವರೆಗೆ ಅನ್ವಯವಾಗಲಿದೆ.
ಈ ಹಿಂದೆ ದೇಶೀಯ ಪ್ರಯಾಣಿಕರಿಗೆ ₹500 ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ₹1,500 ಶುಲ್ಕವಿತ್ತು, ಹೊಸ ದರವು ವಿಮಾನ ನಿಲ್ದಾಣ ನಿರ್ವಾಹಕ ಸಂಸ್ಥೆ ಬಿಐಎಎಲ್ ಪ್ರಸ್ತಾಪಿಸಿದ್ದಕ್ಕಿಂತಲೂ ಕಡಿಮೆಯಾಗಿದೆ.