
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,967 ಹುದ್ದೆಗಳು ಮತ್ತು ಉಳಿಕೆ ಮೂಲ ವೃಂದಕ್ಕೆ 8,033 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಆಗಸ್ಟ್ 18ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಅಭ್ಯರ್ಥಿಗಳು ಜಿಲ್ಲಾವಾರು ಹುದ್ದೆಗಳ ವಿವರ ಮತ್ತು ಮೀಸಲಾತಿ ಮಾಹಿತಿಯನ್ನು www.erajyapatra.karnataka.gov.in ವೆಬ್‌ಸೈಟ್ ಮೂಲಕ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ.