
ದೇಶಾದ್ಯಂತ ಮಾದಕವಸ್ತು ಸಾಗಾಟ ತಡೆಯಲು ಡಿಆರ್ಐ ಅಧಿಕಾರಿಗಳು ಬೆಂಗಳೂರು, ದೆಹಲಿ ಹಾಗೂ ನಾಗಪುರಗಳಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿ ಒಟ್ಟು 9 ಕೆ.ಜಿಗೂ ಅಧಿಕ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಗುರಿಯಾಗಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಮಾದಕವಸ್ತು ಕಳ್ಳಸಾಗಣೆ ಜಾಲಗಳನ್ನು ಭೇದಿಸಲು ಡಿಆರ್ಐ ನಿರಂತರವಾಗಿ ಪ್ರಯತ್ನಿಸುತ್ತಿದ್ದು, ಈ ಮೂರು ಪ್ರಮುಖ ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ.