
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ ನ್ಯಾಯಾಲಯ ಜಾಮೀನುರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.
ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಈ ಆದೇಶ ನೀಡಿದ್ದು, ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ರವಿಕುಮಾರ್ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಹೇಳಿಕೆ ನೀಡಿದ್ದರು.
ಈ ಪ್ರಕರಣ ರದ್ದುಗೊಳಿಸಲು ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರೂ ಮಧ್ಯಂತರ ತಡೆ ಸಿಕ್ಕಿರಲಿಲ್ಲ, ಇದೀಗ ಅಧೀನ ನ್ಯಾಯಾಲಯದ ಸಮನ್ಸ್ ಪಾಲಿಸದ ಕಾರಣ ಬಂಧನ ವಾರಂಟ್ ಹೊರಡಿಸಲಾಗಿದೆ.