
ಹಿಂದುಳಿದ 11 ಜಿಲ್ಲೆಗಳಲ್ಲಿ ಕೈಗಾರಿಕಾ ಹೂಡಿಕೆ ಹಾಗೂ 1 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮಹತ್ವಾಕಾಂಕ್ಷೆಯ ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಯೋಜನೆಯಡಿ ಹೆಚ್ಚುವರಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಎಂಎಸ್ಎಂಇ ಹಾಗೂ ಕೈಗಾರಿಕಾ ಸಂಸ್ಥೆಗಳಿಗೆ ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500ರಂತೆ ಗರಿಷ್ಠ 24 ತಿಂಗಳವರೆಗೆ ಸರ್ಕಾರ ಪ್ರೋತ್ಸಾಹಧನ ನೀಡಲಿದೆ.
ಈ ಯೋಜನೆಗಾಗಿ ವಾರ್ಷಿಕ ₹305 ಕೋಟಿ ಅನುದಾನ ಒದಗಿಸಲಾಗುತ್ತಿದ್ದು, ನೌಕರರಿಗೆ ವೇತನ ಪಾವತಿಯಾಗಿರುವುದನ್ನು ಪರಿಶೀಲಿಸಿದ ನಂತರವೇ ಪ್ರೋತ್ಸಾಹಧನ ನೀಡಲಾಗುತ್ತದೆ.