
‘ಟಾಕ್ಸಿಕ್’ ಚಿತ್ರದ ಅಡ್ವಾನ್ಸ್ ಬುಕಿಂಗ್ ದೇಶದ ಹಲವು ನಗರಗಳಲ್ಲಿ ಆರಂಭವಾಗಿದ್ದರೂ, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮಾತ್ರ ಇನ್ನೂ ಆರಂಭವಾಗಿಲ್ಲ.
ತೆಲುಗು ರಾಜ್ಯಗಳಲ್ಲಿ ಟಿಕೆಟ್ ದರ ಹೆಚ್ಚಳ ಮತ್ತು ಹೆಚ್ಚುವರಿ ಶೋಗಳಿಗೆ ಸರ್ಕಾರದಿಂದ ಅನುಮತಿ ಪಡೆಯುವ ಪ್ರಕ್ರಿಯೆ ನಡೆಯುತ್ತಿರುವುದರಿಂದ ಬುಕಿಂಗ್ ವಿಳಂಬವಾಗಿದೆ ಎಂದು ವರದಿಯಾಗಿದೆ.
ಚಿತ್ರದ ವಿತರಕ ದಿಲ್ ರಾಜು ಅವರು ಸರ್ಕಾರಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಅನುಮತಿ ದೊರೆತ ಕೂಡಲೇ ಬುಕಿಂಗ್ ವಿಂಡೋ ತೆರೆಯಲಾಗುವುದು ಎಂದು ಚಿತ್ರತಂಡ ತಿಳಿಸಿದೆ.