
ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಗಳಿಂದಾಗಿ ಕರಾವಳಿಯ ಮೂರೂ ಜಿಲ್ಲೆಗಳಿಗೆ ಮಳೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ. ಇರಲಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.