
ನಟ ವಸಿಷ್ಠ ಸಿಂಹ ಅವರು ಹಲವು ವರ್ಷಗಳ ಬಳಿಕ ಈ ಬಾರಿ ತಮ್ಮ ಪತ್ನಿ ಮತ್ತು ಮಗನೊಂದಿಗೆ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಈ ವಿಶೇಷ ಸಂದರ್ಭದಲ್ಲಿ ಅವರ ಹೊಸ ಸಿನಿಮಾದ ಶೀರ್ಷಿಕೆ ಹಾಗೂ ಪೋಸ್ಟರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಲಾಗಿದೆ.
ತಮ್ಮನ್ನು ಪ್ರೀತಿಸುತ್ತಿರುವ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ವಸಿಷ್ಠ ಸಿಂಹ, ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲಾಗದು ಎಂದು ಭಾವನೆ ವ್ಯಕ್ತಪಡಿಸಿದ್ದಾರೆ.