
ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸೂಗೂರುನಿಂದ ಆರಂಭವಾಗಿದ್ದ ಬಿಜೆಪಿಯ 10 ದಿನಗಳ ಬಳ್ಳಾರಿ ಚಲೋ ಪಾದಯಾತ್ರೆಯು ಬಳ್ಳಾರಿಯಲ್ಲಿ ಸಮಾರೋಪಗೊಂಡಿದೆ.
ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಪ್ರಲ್ಹಾದ್ ಜೋಶಿ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.
ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತವನ್ನು ಶೂನ್ಯ ಎಂದು ಟೀಕಿಸಿರುವ ಬಿಜೆಪಿ, ಸರ್ಕಾರದ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದೆ.