
ಉತ್ತರ ಪ್ರದೇಶದ ಪ್ರತಾಪ್ಗಢ, ಬಾರಾಬಂಕಿ ಮತ್ತು ಸಹರಾನ್ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಮನೆಗಳ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು ಜನರು ಮೃತಪಟ್ಟಿದ್ದಾರೆ.
ಪ್ರತಾಪ್ಗಢದಲ್ಲಿ ಶತಮಾನದಷ್ಟು ಹಳೆಯ ಮನೆ ಕುಸಿದು ಒಂದೇ ಕುಟುಂಬದ 6 ಮಂದಿ, ಬಾರಾಬಂಕಿಯಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಮತ್ತು ಸಹರಾನ್ಪುರದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ಕಚೇರಿಯು ಮಳೆ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ಮತ್ತು ಮೃತರ ಕುಟುಂಬಗಳಿಗೆ ಕಂದಾಯ ಇಲಾಖೆಯ ಮೂಲಕ ತುರ್ತು ಪರಿಹಾರ ಧನ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.