
ಅಮೃತಸರದ ಶ್ರೀ ಗುರು ರಾಮ್ ದಾಸ್ ಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶಂಕಿತ ಡ್ರೋನ್ಗಳು ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ 7 ವಿಮಾನಗಳನ್ನು ದೆಹಲಿಗೆ ತಿರುಗಿಸಲಾಗಿದೆ.
ಭಾನುವಾರ ರಾತ್ರಿ ಒಂದೂವರೆ ಗಂಟೆಗಳ ಕಾಲ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಮಲೇಷ್ಯಾ ಏರ್ಲೈನ್ಸ್, ಇಂಡಿಗೋ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳು ಮಾರ್ಗ ಬದಲಿಸಿವೆ.
ಪಂಜಾಬ್ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (BSF) ವಿಮಾನ ನಿಲ್ದಾಣದ ಸುತ್ತಮುತ್ತ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಯನ್ನು ಗಂಭೀರ ಭದ್ರತಾ ಬೆದರಿಕೆ ಎಂದು ಪರಿಗಣಿಸಲಾಗಿದೆ.