
ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಿಂದ ದೆಹಲಿ ನ್ಯಾಯಾಲಯ ಸೋಮವಾರ (ಆಗಸ್ಟ್ 3) ಖುಲಾಸೆಗೊಳಿಸಿದ್ದು, ಮಹಿಳಾ ಕುಸ್ತಿಪಟುಗಳು ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಆರು ಜನ ಮಹಿಳಾ ಕುಸ್ತಿಪಟುಗಳು ನೀಡಿದ್ದ ದೂರಿನ ಕುರಿತು ಹೆಚ್ಚುವರಿ ಮುಖ್ಯ ಜುಡಿಶಿಯಲ್ ಮೆಜಿಸ್ಟ್ರೇಟ್ ಅಶ್ವಿನಿ ಪನ್ವಾರ್ ಅವರಿದ್ಧ ನ್ಯಾಯಪೀಠವು ಬ್ರಿಜ್ ಭೂಷಣ್ ಮತ್ತು ವಿನೋದ್ ತೋಮರ್ ಅವರನ್ನು ಆರೋಪ ಮುಕ್ತಗೊಳಿಸಿದೆ.
ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣದ ಆರಂಭದಿಂದಲೂ ಬ್ರಿಜ್ ಭೂಷಣ್ ಅವರನ್ನು ರಕ್ಷಿಸಲು ಸರ್ಕಾರದ ಇಡೀ ವ್ಯವಸ್ಥೆಯೇ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.