
ಮಕ್ಕಳ ಲೈಂಗಿಕ ಶೋಷಣೆ ಮತ್ತು ಡೀಪ್‌ಫೇಕ್ ವಿಚಾರದಲ್ಲಿ ವೈಫಲ್ಯ ಉಂಟಾಗಿದೆ ಎಂದು ಮೆಟಾ ಕಂಪನಿ ಕೇಂದ್ರ ಸರ್ಕಾರದ ಮುಂದೆ ಅಧಿಕೃತವಾಗಿ ತಪ್ಪೊಪ್ಪಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೊವನ್ನು ಫೇಸ್‌ಬುಕ್‌ನಿಂದ ತಾತ್ಕಾಲಿಕವಾಗಿ ತೆಗೆದಿದ್ದಕ್ಕೆ ಮೆಟಾ ಜಾಗತಿಕ ವ್ಯವಹಾರಗಳ ಮುಖ್ಯಸ್ಥ ಜೋಯೆಲ್ ಕಪ್ಲಾನ್ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕ್ಷಮಾಪಣೆ ಪತ್ರ ಸಲ್ಲಿಸಿದ್ದಾರೆ.
ನಕಲಿ ಆ್ಯಪ್‌ಗಳ ಮೂಲಕ ಹೂಡಿಕೆದಾರರು ₹48 ಲಕ್ಷ ಕಳೆದುಕೊಂಡ ಪ್ರಕರಣದಲ್ಲಿ ಗೂಗಲ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸತ್ತಿನ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ.