
ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸುತ್ತಿರುವುದರಿಂದ ದೇಶಾದ್ಯಂತ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸೆಪ್ಟೆಂಬರ್ 26 ಮತ್ತು 27ರ ಶನಿವಾರ ಹಾಗೂ ಭಾನುವಾರದ ಸಾಮಾನ್ಯ ರಜೆಯೂ ಸೇರಿ ಸತತ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಿರಲಿವೆ.
ಬ್ಯಾಂಕ್ ಶಾಖೆಗಳು ಮುಚ್ಚಿದ್ದರೂ ಎಟಿಎಂ, ನೆಟ್ ಬ್ಯಾಂಕಿಂಗ್ ಮತ್ತು ಯುಪಿಐ ಮುಂತಾದ ಡಿಜಿಟಲ್ ಸೇವೆಗಳು ಗ್ರಾಹಕರಿಗೆ ಲಭ್ಯವಿರಲಿವೆ.