
ಆನ್‌ಲೈನ್ ಶಾಪಿಂಗ್ ವೇದಿಕೆಗಳಲ್ಲಿ ವಿಷಕಾರಿ ದತ್ತೂರ ಹಣ್ಣು ಮತ್ತು ಬೀಜಗಳನ್ನು ಆಹಾರವಾಗಿ ಮಾರಾಟ ಮಾಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತೆ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ.
Amazon, Swiggy Instamart ಮತ್ತು BigBasket ಸಂಸ್ಥೆಗಳ ಆಹಾರ ಪರವಾನಗಿ ಮತ್ತು ನೋಂದಣಿಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ.
ದತ್ತೂರ ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಎಂದು ಎಚ್ಚರಿಸಿರುವ ಇಲಾಖೆ, ಎಲ್ಲಾ ಆನ್‌ಲೈನ್ ಲಿಸ್ಟಿಂಗ್‌ಗಳನ್ನು ತಕ್ಷಣ ತೆಗೆದುಹಾಕುವಂತೆ ಮತ್ತು Compliance Report ಸಲ್ಲಿಸುವಂತೆ ಕಂಪನಿಗಳಿಗೆ ಸೂಚಿಸಿದೆ.