
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಒಂದು ಎಕರೆಗೂ ಹೆಚ್ಚು ಜಾಗದಲ್ಲಿ ಭೂಮಿ ಬಿರುಕು ಬಿಟ್ಟಿದೆ.
ಗುಡ್ಡದಿಂದ ಮಣ್ಣು ಜಾರುತ್ತಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆಮಾಡಿದ್ದು, ವಯನಾಡು ಮಾದರಿಯ ದುರಂತ ಸಂಭವಿಸುವ ಭೀತಿ ವ್ಯಕ್ತವಾಗಿದೆ.
ಅಧಿಕಾರಿಗಳು ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಿದ್ದರೂ, ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.