
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಶಿಪ್ರಾ ನದಿ ಘಾಟ್ಗಳಲ್ಲಿ ಏಕಕಾಲಕ್ಕೆ 33.23 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲಾಗಿದೆ.
ಉಜ್ಜಯಿನಿ ಸೇರಿದಂತೆ ಭೋಪಾಲ್, ಇಂದೋರ್, ಗ್ವಾಲಿಯರ್ ಹಾಗೂ ರಾಜ್ಯದ ಪ್ರತಿಯೊಂದು ಗ್ರಾಮದಲ್ಲಿ ಒಟ್ಟು 3.55 ಕೋಟಿ ದೀಪಗಳನ್ನು ಹಚ್ಚಿ ದೀಪಾವಳಿಯಂತಹ ವಾತಾವರಣ ನಿರ್ಮಿಸಲಾಯಿತು.
ಈ ಬೃಹತ್ ಕಾರ್ಯಕ್ರಮಕ್ಕಾಗಿ 35,000ಕ್ಕೂ ಹೆಚ್ಚು ಸ್ವಯಂಸೇವಕರು ಮತ್ತು ಎನ್ಸಿಸಿ ಕೆಡೆಟ್ಗಳು ಶ್ರಮಿಸಿ ಕೇವಲ 15 ನಿಮಿಷಗಳಲ್ಲಿ ಎಲ್ಲಾ ದೀಪಗಳನ್ನು ಬೆಳಗಿಸಿದರು.