
ಜಾಮ್‌ನಗರದ ಗುಜರಾತ್ ಆಯುರ್ವೇದ ವಿಶ್ವವಿದ್ಯಾಲಯದ ಬಿಎಎಂಎಸ್ ಮೂರನೇ ವರ್ಷದ ಶಾಲ್ಯ ತಂತ್ರ–1 ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಜುಲೈ 20ರಂದು ಪರೀಕ್ಷೆ ನಡೆದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಪರೀಕ್ಷೆಗೂ ಮುನ್ನವೇ 12 ಪ್ರಶ್ನೆಗಳ ಪೈಕಿ 11 ಪ್ರಶ್ನೆಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ್ದು, ಈ ಕುರಿತು ತನಿಖೆ ನಡೆಸಲು ವಿಶ್ವವಿದ್ಯಾಲಯವು ಸಮಿತಿಯನ್ನು ರಚಿಸಿದೆ.
ಕಳೆದ ಒಂದು ದಶಕದಲ್ಲಿ ರಾಜ್ಯದಲ್ಲಿ 34 ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.