ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದು, ವಯಸ್ಸಿನ ಕಾರಣದಿಂದ ಆರೋಗ್ಯದ ಸಮಸ್ಯೆ ಮತ್ತು 50 ವರ್ಷಗಳ ರಾಜಕೀಯ ಜೀವನ ಪೂರ್ಣಗೊಳ್ಳುತ್ತಿರುವುದು ಈ ನಿರ್ಧಾರಕ್ಕೆ ಪ್ರಮುಖ ಮೂರು ಕಾರಣಗಳಾಗಿವೆ.
1978ರಲ್ಲಿ ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದ ಸಿದ್ದರಾಮಯ್ಯ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಧ್ವನಿಯಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.