
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 15ರಂದು ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಲಿದೆ.
ಟೀಂ ಇಂಡಿಯಾಕ್ಕೆ ಇದು 600ನೇ ಟೆಸ್ಟ್ ಪಂದ್ಯವಾಗಿದ್ದು, ಈ ಮೈಲಿಗಲ್ಲನ್ನು ತಲುಪಿದ ವಿಶ್ವದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಗಾಲೆ ಟೆಸ್ಟ್ ಪಂದ್ಯದ ಮೊದಲ ದಿನದಾಟದ ವೇಳೆ ಶೇ. 82ರಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಪಂದ್ಯ ನಡೆಯುವುದು ಅನುಮಾನ ಎಂದು ವರದಿಯಾಗಿದೆ.