
ಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್‌ನಲ್ಲಿ 3 ವರ್ಷದ ಬಾಲಕ ಅಜಾನ್ ಮಹ್ಮದ್ ಅಲಿ ಮೇಲೆ ನಾಲ್ಕೈದು ಬೀದಿ ನಾಯಿಗಳ ಹಿಂಡು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ.
ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಯ ತುರ್ತು ನಿಘಾ ಘಟಕದಲ್ಲಿ (ICU) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಯಿಗಳ ಹಾವಳಿ ನಿಯಂತ್ರಣದಲ್ಲಿ ವಿಫಲವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.