
ರಾಜ್ಯದಲ್ಲಿ ನವೆಂಬರ್ 8ರವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಮಳೆ ಮುಂದುವರಿಯಲಿದೆ.
ನವೆಂಬರ್ 10ರ ಸುಮಾರಿಗೆ ಬಂಗಾಳಕೊಲ್ಲಿಗೆ ಹೊಸ ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದ್ದು, ಇದು ವಾಯುಭಾರ ಕುಸಿತವಾದರೆ ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.