
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಅಕ್ಟೋಬರ್ 2ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ಕಾನೂನುಬದ್ಧ ಅಪರಾಧಿಕ ಪ್ರಕ್ರಿಯೆಗಳನ್ನು ಆರಂಭಿಸಬೇಕು ಮತ್ತು ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಸಿಜೆಪಿ ಆಗ್ರಹಿಸಿದೆ.
ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟಿದೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಆಯೋಗ, ಎಸ್‍ಐಆರ್ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ಮೂವರೂ ಆಯುಕ್ತರ ಒಮ್ಮತದೊಂದಿಗೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.