
ಸಂಸತ್ತಿನ ಆವರಣದಲ್ಲಿ ರಾಮಮಂದಿರ ದೇಣಿಗೆ ಕಳವು ಪ್ರಕರಣವನ್ನು ಅಣಕಿಸುವಂತೆ ಪ್ರದರ್ಶನ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ, ಪಪ್ಪು ಯಾದವ್ ಮತ್ತು ಅವಧೇಶ್ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂಸದೆ ಬಾನ್ಸುರಿ ಸ್ವರಾಜ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೆಹಲಿಯ ಸಂಸತ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿಯಲ್ಲೂ ಮೂವರು ಸಂಸದರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರತಿಭಟನೆಯ ವೇಳೆ ಪಪ್ಪು ಯಾದವ್ ಅರ್ಚಕರ ವೇಷದಲ್ಲಿ ಕಾಣಿಸಿಕೊಂಡು, ರಾಹುಲ್ ಗಾಂಧಿ ಸೇರಿದಂತೆ ಇತರ ಸಂಸದರೊಂದಿಗೆ ದೇಣಿಗೆ ಕಳವು ಮಾಡುವ ಸಾಂಕೇತಿಕ ದೃಶ್ಯವನ್ನು ಪ್ರದರ್ಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.