
ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ಸಿಐಡಿ ತನಿಖೆಯಲ್ಲಿ ಓಎಂಆರ್ ಶೀಟ್ ತಿದ್ದುಪಡಿ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಸಾಬೀತಾಗಿದ್ದು, ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಸೆಪ್ಟೆಂಬರ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜನವರಿ 8 ಮತ್ತು 9ರಂದು ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ 70ರಿಂದ 80 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.