
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2027ರ ವಾರ್ಷಿಕ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ನವೆಂಬರ್ 11ರವರೆಗೆ ಕಾಲಾವಕಾಶ ನೀಡಿದೆ.
ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5ರಷ್ಟು ಹೆಚ್ಚಿಸಿದ್ದು, ಕೇವಲ ಎರಡು ವರ್ಷಗಳಲ್ಲಿ ಒಟ್ಟು ಶೇ. 10.36ರಷ್ಟು ಏರಿಕೆಯಾಗಿ ಸಾಮಾನ್ಯ ಶುಲ್ಕ 746 ರೂ.ಗೆ ತಲುಪಿದೆ.
ಸರ್ಕಾರದ ಈ ದಿಢೀರ್ ಶುಲ್ಕ ಹೆಚ್ಚಳವು ಆರ್ಥಿಕವಾಗಿ ಹಿಂದುಳಿದ ಹಾಗೂ ಮಧ್ಯಮ ವರ್ಗದ ಪೋಷಕರಿಗೆ ಆರ್ಥಿಕ ಹೊರೆ ಹೊರಿಸಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.