
ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮನೊರಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 7 ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.
ಸ್ಫೋಟದ ತೀವ್ರತೆಗೆ ಸಮೀಪದ ನಾಲ್ಕೈದು ಕಾರ್ಖಾನೆಗಳು ಮತ್ತು ಮನೆಗಳು ಕುಸಿದಿದ್ದು, ದೆಹಲಿ-ಹೌರಾ ರೈಲು ಮಾರ್ಗದಲ್ಲಿ ಒಂದು ಗಂಟೆಗಳ ಕಾಲ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ರಕ್ಷಣಾ ಕಾರ್ಯಾಚರಣೆಯಲ್ಲಿ ಡಜನ್ಗೂ ಅಧಿಕ ಅಗ್ನಿಶಾಮಕ ವಾಹನಗಳು ಮತ್ತು 50ಕ್ಕೂ ಹೆಚ್ಚು ವಾಯುಸೇನೆಯ ಸಿಬ್ಬಂದಿ ಭಾಗವಹಿಸಿದ್ದು, ಗಾಯಾಳುಗಳನ್ನು ಪ್ರಯಾಗರಾಜ್ನ ಎಸ್ಆರ್ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.