
ಬೆಂಗಳೂರು ನಗರದಲ್ಲಿ ರಾತ್ರಿಯಿಡೀ ಸುರಿದ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ.
ಮಲ್ಲೇಶ್ವರಂನಲ್ಲಿ ಬೃಹತ್ ಮರವೊಂದು ರಸ್ತೆಗೆ ಧರೆಗುರುಳಿದ ಪರಿಣಾಮ ಪಾರ್ಕ್ ಮಾಡಲಾಗಿದ್ದ ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಅವಘಡದ ಸಮಯದಲ್ಲಿ ಕ್ಯಾಬ್ ಒಳಗೆ ಮಲಗಿದ್ದ ಚಾಲಕ ವಿನೋದ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.