
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕೇರಳ ವಿಧಾನಸಭೆಯು ಬೃಹತ್ ಬೆಂಬಲದೊಂದಿಗೆ ನಿರ್ಣಯ ಅಂಗೀಕರಿಸಿದೆ.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆಗೆ ಒಳಪಡಿಸಬೇಕೆಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.
ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಲ್ಲಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳು ಇರಬೇಕೆಂದು ಆಗ್ರಹಿಸಲಾಗಿದೆ.