
ವಿಜಯ್ ರಾಘವೇಂದ್ರ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಇದೀಗ ತೆಲುಗು ಭಾಷೆಗೆ ಡಬ್ ಆಗಿ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ.
ಫೆಬ್ರವರಿ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ, ಅಮೆಜಾನ್ ಪ್ರೈಂನಲ್ಲಿ ಕನ್ನಡ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದ ನಂತರ ತೆಲುಗಿಗೆ ಡಬ್ ಮಾಡಲಾಗಿದೆ.
ದೇವಿಶ್ರೀ ಪ್ರಸಾದ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಗೋಪಾಲ್ ದೇಶಪಾಂಡೆ ಮತ್ತು ಸಾಗರ್ ಪುರಾಣಿಕ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.